ಬೆಂಗಳೂರು: ಬೆಂಗಳೂರಿನಲ್ಲಿ ಕೆಲಸ ಮಾಡಬೇಕು, ಉದ್ಯೋಗ ಹಿಡಿದು ಜೀವನದಲ್ಲಿ ಸೆಟಲ್ ಆಗಬೇಕು ಎಂಬ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಅಚಾರ್ಯ ಪಾಠ ಶಾಲೆ ಶಿಕ್ಷಣ ಸಂಸ್ಥೆ ವತಿಯಿಂದ ಮೇ 3ರಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ಆಚಾರ್ಯ ಕ್ಯಾಂಪಸ್ ನಲ್ಲಿ ಎಜುಕೇಷನ್ ಎಕ್ಸ್ ಪೋ ಮತ್ತು ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಜುಕೇಷನ್ ಎಕ್ಸ್ ಪೋದಲ್ಲಿ ನಗರದ ಹಲವು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗವಹಿಸಲಿದ್ದು, ಒಂದೇ ವೇದಿಕೆಯಲ್ಲಿ ವಿವಿಧ ಉದ್ಯೋಗಾಧಾರಿತ ಕೋರ್ಸ್ ಗಳ ಬಗ್ಗೆ ಮಾಹಿತಿ ದೊರೆಯಲಿದೆ.
ಹಾಗೆಯೇ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಜೊತೆ ನೇರ ಸಂವಾದ ನಡೆಸ ಬಹುದಾಗಿದೆ. ಉದ್ಯೋಗ ಮೇಳದಲ್ಲಿ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. 10ನೇ ತರಗತಿ ಪಾಸಾದವರಿಂದ ಹಿಡಿದು ಯಾವುದೇ ಪದವೀಧರರು ಕೂಡ ಈ ಮೇಳದಲ್ಲಿ ಭಾಗವಹಿಸಬಹುದು.