ಕೊಡಗು : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಾಗಡಿಕಟ್ಟೆ ಬಳಿ ನಡೆದಿದೆ.
ಇಂದು ಬೆಳಗ್ಗಿನ ಜಾವ 2:30 ಗಂಟೆ ಸುಮಾರಿಗೆ ಶನಿವಾರಸಂತೆ ರಸ್ತೆಯಲ್ಲಿ ಗೂಡ್ಸ್ ವಾಹನ ಬರುತ್ತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನ ಸಂಖ್ಯೆ KA13-B 3078ರಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದು, ಮೂರು ಗೋವುಗಳು ಗಾಯಗೊಂಡಿದೆ. ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಆರೋಪಿಗಳನ್ನು ಬೇರೆ ಕಡೆ ಸಾಗಿಸಲಾಗಿದೆ.
ಈ ಅವಘಡದ ಬಳಿಕ ಕೊಡಗಿನಲ್ಲಿ ಗೋವುಗಳ ಅಕ್ರಮ ಸಾಗಾಟ ಹಾಗೂ ಗೋಹತ್ಯೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದಾರೆ.