ಬೆಂಗಳೂರು ನಗರ ಜಿಲ್ಲಾ ಮದ್ಯ ವ್ಯಾಪಾರಿಗಳ ಸಂಘವು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ.
ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮಾವೇಶ ಮಾಡುವ ಮೂಲಕ ಸರ್ಕಾರಕ್ಕೆ ಉತ್ತರ ಕೊಡುವ ಪ್ರಯತ್ನ ಮಾಡುತ್ತಿದೆ. ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳುವುದರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದೆ.
ಲೈಸೆನ್ಸ್ ರೀನಿವಲ್ ಹಾಗೂ ಹೊಸ ಲೈಸೆನ್ಸ್ ಗೆ ಅತಿ ಹೆಚ್ಚು ಶುಲ್ಕ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ಸಮಾವೇಶ ನಡೆಸಲಾಗಿದೆ. ಈ ವೇಳೆ ಎಲ್ಲ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಲಾಗಿದೆ.