ಬೆಂಗಳೂರು: ವರನಟ ಡಾ. ರಾಜಕುಮಾರ್ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಗೋಕಾಕ್ ಚುಳುವಳಿಯ ಉದ್ಯಾನವನದಲ್ಲಿ ಸರಳ ಜನ್ಮದಿನ ಆಚರಿಸಲಾಯಿತು.
ಮಲ್ಲೇಶ್ವರಂನ 18ನೇ ಕ್ರಾಸ್ ನಲ್ಲಿರುವ ಉದ್ಯಾನವನದಲ್ಲಿ ರಾಜಕುಮಾರ್ ಅವರ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. ಈ ವೇಳೆ ಐವರು ಕಲಾವಿದರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.