ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಹೀಗಾಗಿ ಹಲವೆಡೆ ಮಳೆಯಿಂದಾಗಿ ರೈತ ಬಿತ್ತಿದ ಬೆಳೆಗಳು ಮಣ್ಣು ಪಾಲಾಗುತ್ತಿವೆ. ಹಲವೆಡೆ ಮಳೆಗಾಗಿ ರೈತ, ಮುಗಿಲಿನತ್ತ ಮುಖ ಮಾಡುವಂತಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.
ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜೂನ್ 30ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಜುಲೈ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 2 ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ.29ರಿಂದ ಜು.2ರ ವರೆಗೆ ಕರಾವಳಿ¬ಯಲ್ಲಿಸಾಧಾರಣ ಮತ್ತು ಒಳನಾಡಿನ ಬಹುತೇಕ ಜಿಲ್ಲೆಗಲಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.