ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ. ಅಲ್ಲದೇ, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜೂನ್ 15ರ ವರೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರಿ ಮಳೆ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?
ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ
ಬೆಳಗಾವಿ, ಧಾರವಾಡ,ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂ. 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂ. 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.