ಬೆಂಗಳೂರು: ರಾಜ್ಯದಲ್ಲಿ ಜೂನ್ 26ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಕರಾವಳಿ ಸೇರಿದಂತೆ ಉತ್ತರ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮುಂಗಾರು ಮಳೆಯ (Monsoon Rain) ಆರ್ಭಟ ಮುಂದುವರಿಯಲಿದೆ. ಜೂನ್ 26ರ ವರೆಗೆ ಕರಾವಳಿ (Karavali) ಭಾಗದಲ್ಲಿ ಭಾರೀ ಮಳೆ ಆಗಲಿದ್ದು, ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ (Dakshina Kannada), ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜೂ. 26ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 26ರ ವರೆಗೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಅಲ್ಲದೇ, ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.