ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊತುಪಡಿಸಿ ಗರಿಷ್ಠ 200 ರೂ. ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸೆಪ್ಟೆಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ʻಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025ʼ ರದ್ದು ಕೋರಿ ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್ ಹಾಗೂ ವಿ.ಕೆ.ಫಿಲ್ಮ್ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ರವಿ ಹೊಸಮನಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಸಿನಿಮಾ ಟಿಕೆಟ್ 200 ರೂ. ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ದರ ನಿಗದಿ ಪಡಿಸಲು ಸರ್ಕಾರಕ್ಕೆ ಅವಕಾಶವಿಲ್ಲ
ಇನ್ನೂ ಹೊಂಬಾಳೆ ಫಿಲ್ಮ್ಸ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಾಡಿದ್ರು. ಹೊಂಬಾಳೆ ಫಿಲ್ಮ್ಸ್ ಕಾಂತಾರದಂತಹ ದೊಡ್ಡ ಚಿತ್ರವನ್ನು ನಿರ್ಮಿಸಿದ್ದಾರೆ.ಜಿಎಸ್‌ಟಿ ಹೊರತುಪಡಿಸಿದ ಟಿಕೆಟ್ ದರ 200 ರೂ. ನಿಗದಿಪಡಿಸಲಾಗಿದೆ. ವಿವೇಚನೆಯಿಲ್ಲದೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ರು. ಸಿನಿಮಾ ನಿರ್ಮಿಸಲು ಎಷ್ಟೆಲ್ಲಾ ಶ್ರಮ, ಬಂಡವಾಳ ಬೇಕಾಗುತ್ತೆ, ಅಂಕಿ-ಅಂಶ ಸಂಗ್ರಹಿಸದೇ ರಾಜ್ಯ ಸರ್ಕಾರ ಈ ನಿರ್ಧಾರ ಮಾಡಿದೆ.ದರ ನಿಗದಿಪಡಿಸಲು ನಿಯಮ 55ರ ಅಡಿ ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲವೆಂದು ಹೊಂಬಾಳೆ ಫಿಲ್ಮ್ಸ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಾಡಿದ್ದರು