ನಟ ಆಮಿರ್ ಖಾನ್ (Aamir Khan) ನಟನೆಯ ಮ(Sitaare Zameen Par Collection) ಚಿತ್ರ ಗುರುವಾರ ಬಿಡುಗಡೆಯಾಗಿದ್ದು, ಈಗ ಮೊದಲ ದಿನ ಎಷ್ಟು ದುಡಿದಿದೆ ಎಂದು ಎಲ್ಲರೂ ಲೆಕ್ಕಾಚಾರ ಹಾಕುತ್ತಿದ್ದಾರೆ.
ಈ ಚಿತ್ರಕ್ಕೆ ಆಮಿರ್ ಖಾನ್ ಬಂಡವಾಳ ಹೂಡಿದ್ದಾರೆ. ಅನೇಕ ಹೊಸ ಕಲಾವಿದರಿಗೆ ಅವರು ಅವಕಾಶ ನೀಡಿದ್ದಾರೆ. ಆಮಿರ್ ಖಾನ್ ಜೊತೆ ನಾಯಕಿಯಾಗಿ ಜೆನಿಲಿಯಾ ದೇಶಮುಖ್ ನಟಿಸಿದ್ದಾರೆ. ಆರ್.ಎಸ್. ಪ್ರಸನ್ನ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಮೊದಲ ದಿನ 10ರಿಂದ 13 ಕೋಟಿ ರೂ. ಮಾತ್ರ ಕಲೆಕ್ಷನ್ ಮಾಡಿದೆ ಎಂದು ತಿಳಿದು ಬಂದಿದೆ.
ಆದರೆ, ಈ ಚಿತ್ರಕ್ಕೆ ಪಾಸಿಟಿವ್ ವಿಮರ್ಶೆ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್ನಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಭಾವಿಸಲಾಗುತ್ತಿದೆ.