ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಗುತ್ತಿದ್ದಂತೆ ಪಾಲಿಕೆ ವಿಭಜನೆಗೆ ಸರ್ಕಾರ ಮುಂದಾಗಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಮೂರು ಪಾಲಿಕೆ ಮಾಡಲು ಸರ್ಕಾರ ತಯಾರಿ ನಡೆಸಿದೆ. ಒಂದೂವರೆ ಕೋಟಿ ಜನಸಂಖ್ಯೆಯ ಬೆಂಗಳೂರು ನಗರವನ್ನು ಮೂರು ಭಾಗಗಳಲ್ಲಿ ವಿಭಜನೆ ಮಾಡಲಾಗುತ್ತಿದೆ. 50 ಲಕ್ಷ ಜನಸಂಖ್ಯೆಗೊಂದರಂತೆ ಪಾಲಿಕೆ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.
ಕೇಂದ್ರ ಬೆಂಗಳೂರು ಪಾಲಿಕೆ, ಉತ್ತರ ಬೆಂಗಳೂರು ಪಾಲಿಕೆ, ದಕ್ಷಿಣ ಬೆಂಗಳೂರು ಪಾಲಿಕೆ ಎಂದು ಮೂರು ಪಾಲಿಕೆ ವಿಭಜನೆ ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ 150 ಪಾರ್ಡ್ ಗಳ ವಿಂಗಡನೆ ಮಾಡಲಾಗುವುದು. ಹೀಗಾಗಿ ಹೊಸ ಬೆಂಗಳೂರು ವ್ಯಾಪ್ತಿಗೆ ಹೊಸ ಪ್ರದೇಶಗಳನ್ನು ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಿ 30 ದಿನಗಳ ಕಾಲ ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ ಮಾಡಿಕೊಡಲಾಗುತ್ತದೆ.
ಆನಂತರವೇ ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಬಿಬಿಎಂಪಿ ಹಾಗೂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರುವ ಗ್ರಾಮ ಪಂಚಾತಿಗಳು ಅಸ್ತಿತ್ವ ಕಳೆದುಕೊಳ್ಳಲಿವೆ. ಹೊಸ ಪಾಲಿಕೆ ಅಸ್ತಿತ್ವಕ್ಕೆ ಬರುವವರೆಗೂ ರಾಜ್ಯ ಸರ್ಕಾರ ಎಲ್ಲಾ ಹೊಣೆಗಾರಿಕೆ ನಿರ್ವಹಣೆ ಮಾಡಲಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರುವ ಪ್ರದೇಶಗಳು!
ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ, ಬೊಮ್ಮಸಂದ್ರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿ ಸೇರುತ್ತವೆ. ಹೀಗೆ ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಂಗಡಿಸಲು ಸರ್ಕಾರ ಮುಂದಾಗಿದೆ.