ಬೆಂಗಳೂರು: ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗುತ್ತಿದ್ದು, 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಇಂದು ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. 12:30ರ ನಂತರ ವೆಬ್ ಸೈಟ್ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು.
ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ಪರೀಕ್ಷೆ-1 ನಡೆದಿದ್ದವು. ಈ ಬಾರಿ SSLC ಪರೀಕ್ಷೆ-1ಕ್ಕೆ 8 ಲಕ್ಷ 96 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 2,818 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು.