ಬಳ್ಳಾರಿ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ (Ballary) ಸಿರುಗುಪ್ಪ (Siraguppa) ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗ್ರಾಮದ ವಿರೇಶ್ ಎನ್ನುವವರ ಪುತ್ರ ಸಿರಿ (4) ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಗುರುವಾರ ಏಕಾಏಕಿ ಕಾಣೆಯಾಗಿದ್ದ ಬಾಲಕ ಸಿರಿ ಆಟವಾಡಲು ಹೋಗಿ ಬಾವಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಬಾಲಕ ಕಾಣೆಯಾದಾಗ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತೀವ್ರ ಹುಡುಕಾಟ ನಡೆಸಿದ್ದರು.
ಶುಕ್ರವಾರ ಸಂಜೆ ಗ್ರಾಮಸ್ಥರು ಬಾವಿಯಲ್ಲಿ ಶವ ತೇಲುವುದನ್ನು ಗಮನಿಸಿದ್ದಾರೆ. ಆನಂತರ ಶವ ಹೊರ ತೆಗೆದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.