ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಾಗಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ 1,010 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 1,010 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 11 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ : ಇಂಟಿಗ್ರಲ್ ಕೋಚ್ ಫ್ಯಾಕ್ಟರಿ
ಹುದ್ದೆ ಹೆಸರು : ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ : 1,010
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಬಿ.ಟೆಕ್, ಬಿ.ಇ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 22-24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಕಾರ್ಪೆಂಟರ್, ಎಲೆಕ್ಟ್ರಿಶಿಯನ್, ಫಿಟ್ಟರ್, ಮಷಿನಿಸ್ಟ್, ವೆಲ್ಡರ್, ಪೇಂಟರ್ ಸೇರಿ ಹಲವು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇವರಿಗೆ ಮಾಸಿಕ 7 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ icf.gov.in. ವೆಬ್ ಸೈಟ್ ಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು