ಬಿಬಿಎಂಪಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಬಿಬಿಎಂಪಿ ಕಚೇರಿಗೆ ನುಗ್ಗಿ ಸಾರ್ವಜನಿಕರು ಹೈಡ್ರಾಮಾ ನಡೆಸಿರುವ ಘಟನೆ ನಡೆದಿದೆ.
ಲೋಕ ಶಕ್ತಿ ಸಂಘಟನೆಯ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಏಕಾಏಕಿ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಚುನಾವಣೆ ನಡೆಸದಿರುವುದರಿಂದ ಬೆಂಗಳೂರು ಅಭಿವೃದ್ಧಿಯಾಗುತ್ತಿಲ್ಲ. ಆದಷ್ಟು ಬೇಗ ಪಾಲಿಕೆ ಚುನಾವಣೆ ನಡೆಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸುವುದರೊಂದಿಗೆ ಪಾಲಿಕೆ ಅಧಿಕಾರಿಗಳ ಕುರ್ಚಿಗೆ ಬೆಂಕಿ ಇಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಪಾಲಿಕೆ ಕಚೇರಿಗೆ ನುಗ್ಗಿದ್ದ ಪ್ರತಿಭಟನಾಕಾರರು ಅಧಿಕಾರಿಗಳ ಚೇರ್ ಎಳೆದು ಬೆಂಕಿ ಹಚ್ಚಲು ಮುಂದಾಗಿದ್ದರು. ಹಲಸೂರು ಗೇಟ್ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.