ಬೆಂಗಳೂರು: ಬೆಂಗಳೂರಿನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (ಐಐಎಂಬಿ) ಸಂಸ್ಥೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಮೇ 20 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಐಐಎಂಬಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮೊದಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಇದಾದ ನಂತರ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದಲ್ಲಿ ತೋರಿದ ಪ್ರದರ್ಶನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ, ಪಿಯುಸಿ ಅಂಕಪಟ್ಟಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಸೇರಿ ಯಾವುದೇ ಪದವಿ ಎಲ್ಲ ಅಂಕಪಟ್ಟಿಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ ಎಂದು ತಿಳಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್‌ಸೈಟ್ ಆಗಿರುವ https://www.iimb.ac.in/ ಗೆ ಭೇಟಿ ನೀಡಬೇಕು.
- ತಾಂತ್ರಿಕ ಸಹಾಯಕ ಹುದ್ದೆಗಳ ಅಧಿಸೂಚನೆಯನ್ನು ಓಪನ್ ಮಾಡಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಮೇ 20ರೊಳಗೆ ಅರ್ಜಿ ಸಲ್ಲಿಸಿ. ಭವಿಷ್ಯದ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಟ್ಟುಕೊಳ್ಳಿ.