ರಾಜ್ಯದ ಅಣೆಕಟ್ಟುಗಳಿಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಣೆಕಟ್ಟುಗಳಿಗೆ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರ ತುರ್ತು ಆದೇಶ ಹೊರಡಿಸಿದೆ. ರಾಷ್ಟ್ರದಲ್ಲಾಗುತ್ತಿರುವ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳಿಗೆ ಭದ್ರತೆ ಒದಗಿಸುವಂತೆ ಆದೇಶ ಹೊರಡಿಸಲಾಗಿದೆ.
ಹೀಗಾಗಿ ರಾಜ್ಯದಲ್ಲಿನ ಎಲ್ಲ ಆಣೆಕಟ್ಟುಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಹೆಚ್ಚಿನ ಭದ್ರತೆ ಒದಗಿಸಲು ಆದೇಶ ನೀಡಿಲಾಗಿದೆ. ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಅಣೆಕಟ್ಟುಗಳಿಗೆ ಭದ್ರತೆ ಒದಗಿಸುವಂತೆ ಸರ್ಕಾರ ಸೂಚಿಸಿದೆ.
ತಕ್ಷಣ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ನೇಮಕ ಮಾಡಿ. ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ಹೊಣೆಗಾರರು ಎಂದು ಸೂಚನೆ ನೀಡಿದ್ದಾರೆ.