ಬೆಂಗಳೂರು : ರಾಜ್ಯದಲ್ಲಿ ಭಾರೀ ಹೋರಾಟಕ್ಕೆ ಕಾರಣವಾಗಿದ್ದ ಒಳಮೀಸಲಾತಿ ವರದಿ ಕೊನೆಗೂ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ದಲಿತ ಸಮುದಾಯದ ಒಳ ಪಂಗಡಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ಈ ವರದಿ ಮಹತ್ವ ಪಡೆದುಕೊಂಡಿದೆ.
ಈ ಸಂಬಂಧಿಸಿದಂತೆ ಮಾಜಿ ಸಚಿವ ಆಂಜನೇಯ ಮಾತನಾಡಿ,”ಎಸ್ ಸಿ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ವರದಿಯನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸುವರ್ಣಾವಕಾಶ. ಶೀಘ್ರವಾಗಿ ಒಳಮೀಸಲಾತಿ ಜಾರಿಗೆ ತರಬೇಕು ಎಂದಿದ್ದಾರೆ.
ಸಂಪುಟಕ್ಕೆ ತಂದು ಬಿಲ್ ಪಾಸ್ ಮಾಡಬೇಕು. ಆಗಸ್ಟ್ ತಿಂಗಳಲ್ಲಿ ಒಳಮೀಸಲಾತಿ ಜಾರಿಗೆ ಬಂದರೆ ಮಾದಿಗರಿಗೆ ಸ್ವಾತಂತ್ರ್ಯ ಬಂದಂತೆ. ಇದಕ್ಕೆ ಸಾಕಷ್ಟು ಹೋರಾಟ ನಡೆದಿದೆ. ಇದೀಗ ಅಂತಿಮವಾಗಿ ಒಳಮೀಸಲಾತಿ ಜಾರಿಗೆ ಅವಕಾಶ ಕೂಡಿಬಂದಿದೆ” ಎಂದವರು ಹೇಳಿದ್ಧಾರೆ.