ಬೆಂಗಳೂರು: ಐತಿಹಾಸಿಕ ಒಳಮೀಸಲಾತಿ ವರದಿಯನ್ನು ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸಮೀಕ್ಷೆ ಮಾಡಿ, ಇಂದು ಸಿಎಂಗೆ ಒಪ್ಪಿಸಿದ್ದಾರೆ. ಇಡೀ ದೇಶದಲ್ಲಿ ಆಧುನಿಕವಾಗಿ ತಾಂತ್ರಿಕವಾಗಿ ಉಪಯೋಗ ಮಾಡಿ ಎರಡು ತಿಂಗಳಲ್ಲಿ ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಅದರಲ್ಲಿ ಏನಿದೆ ಎನ್ನುವುದು ಗೊತ್ತಿಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಇಡಲಾಗುತ್ತದೆ. ಬಳಿಕ ಅದನ್ನು ಅನುಷ್ಠಾನದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯನ್ನು ನಾನು ಜಾರಿ ಮಾಡುವುದಲ್ಲ. ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಬೇಕು. ಸಂಪುಟ ಸಭೆಯ ತೀರ್ಮಾನದ ಬಳಿಕ ಜಾರಿ ಮಾಡಲಾಗುತ್ತದೆ ಎಂದವರು ಹೇಳಿದ್ದಾರೆ.