ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಡಿ. ರೂಪಾ ಅವರಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ.
ಐಜಿಪಿಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿಯಾಗಿ (ಎಡಿಜಿಪಿ) ಸರ್ಕಾರವು ಮುಂಬಡ್ತಿ ನೀಡಿದೆ. ಇತ್ತೀಚೆಗೆ ಮುಂಬಡ್ತಿ ವಿಚಾರವಾಗಿ ಡಿ. ರೂಪಾ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು, “ಮುಂಬಡ್ತಿ ಕುರಿತು ಹೊಸದಾಗಿ ಅರ್ಜಿ ಸಲ್ಲಿಸುವಂತೆ ರೂಪಾ ಅವರಿಗೆ ಸೂಚಿಸಿತ್ತು. ಆನಂತರ ಸರ್ಕಾರವು ಎಂಟು ವಾರಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು” ಎಂದು ಆದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತ್ತು.
ಈಗ ಸರ್ಕಾರವು ಡಿ. ರೂಪಾ ಅವರಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. ಆದರೆ, ಈಗ ಇರುವ ಹುದ್ದೆಯಲ್ಲೇ ಅವರನ್ನು ಮುಂದುವರೆಸಲಾಗಿದೆ.