ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಶುರುವಾಗಿದ್ದು, ಸರ್ಕಾರವು ಕಣ್ಮುಚ್ಚಿ ಕುಳಿತುಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದ ನಡುವೆ ಸರ್ಕಾರವು ಕೊರೊನಾ ಮರೆತು ಬಿಟ್ತಾ? ಎಂದು ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯದಲ್ಲಿ ಸದ್ದಿಲ್ಲದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಿಯಂತ್ರಣಕ್ಕೆ ಸಿಗದಂತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಸೋಂಕಿತ ಸಂಖ್ಯೆ 1 ಸಾವಿರ ಗಡಿಗೆ ಬಂದು ನಿಂತಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 955 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 9 ಜನರು ಉಸಿರು ಚೆಲ್ಲಿದ್ದಾರೆ.
423 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 7 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಓರ್ವ ವ್ಯಕ್ತಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ILI, SARI ಪ್ರಕರಣಗಳಿಗೆ ಹಾಗೂ ಗುಣಲಕ್ಷಣ ಇದ್ದವರಿಗೆ ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಆದರೆ, ಸರ್ಕಾರವು ಟೆಸ್ಟ್ ಗಳನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಜನರು ಮನವಿ ಮಾಡುತ್ತಿದ್ದಾರೆ.