ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ 30 ಸ್ಥಾನಗಳನ್ನು ಗೆದ್ದಿದೆ. ಎನ್ ಡಿಎ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಆರಂಭದಲ್ಲಿ ಹಿಂದುಳಿದಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್ ಆನಂತರ ಮೇಲೆದ್ದು, ಭರ್ಜರಿ ಜಯ ಸಾಧಿಸಿದೆ. 81 ಸದಸ್ಯರ ವಿಧಾನಸಭೆಯಲ್ಲಿ 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಇಂಡಿಯ ಬ್ಲಾಕ್ ಮುಂದಿದೆ. ಇಂದು ಮತ ಎಣಿಕೆ ಆರಂಭವಾದಾಗ ಭಾರೀ ಮುನ್ನಡೆ ಸಾಧಿಸಿದ್ದ ಬಿಜೆಪಿ ನೇತೃತ್ವದ ಎನ್ಡಿಎ ಇದೀಗ 26 ಸ್ಥಾನಗಳಲ್ಲಿ ಮಾತ್ರ ಮುಂದಿದೆ.
ಜಾರ್ಖಂಡ್ ಚುನಾವಣೆಯಲ್ಲಿ ಭಾರೀ ಗೆಲುವಿಗಾಗಿ ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಹೇಮಂತ್ ಸೊರೆನ್ ಅವರನ್ನು ಅಭಿನಂದಿಸಿದ್ದಾರೆ. “JMM ಮತ್ತು ಅದರ ಮಿತ್ರಪಕ್ಷಗಳು ಜಾರ್ಖಂಡ್ನಲ್ಲಿ ಪ್ರಭಾವಶಾಲಿ ವಿಜಯವನ್ನು ಗಳಿಸಿವೆ. ಈ ಸಾಧನೆಗಾಗಿ ಹೇಮಂತ್ ಸೊರೇನ್ ಮತ್ತು ಅವರ ಇಡೀ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ.
ಹೇಮಂತ್ ಸೊರೆನ್ 39,791 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.