ಸರ್ವರಿಗೂ ನ್ಯಾಯ- ನಮ್ಮ ಧ್ಯೇಯ ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸುವಂತೆ ವರಿಷ್ಠರು ಸಲಹೆ ನೀಡಿದ್ದಾರೆ. ಹೀಗಾಗಿ ಯಾವ ವರ್ಗದವರಿಂದಲೂ ಸಣ್ಣ ಅಪಸ್ವರ ಬಾರದಂತೆ, ಯಾರಿಗೂ ಅನ್ಯಾಯ ಆಗದಂತೆ ಅವಕಾಶವನ್ನು ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಬಾರಿ ಮತ್ತೊಂದು ಸುವರ್ಣಾವಕಾಶ ನೀಡುತ್ತಿದ್ದೇವೆ. ಎಲ್ಲರೂ ಅವರ ಜಾತಿಯ ಗುರುತನ್ನು ನ್ಯಾಯಬದ್ಧವಾಗಿ ಸಮೀಕ್ಷಾ ತಂಡಕ್ಕೆ ನೀಡಬೇಕು. ಗಣತಿ ಎನ್ನುವುದು ಸುದೀರ್ಘ ಪ್ರಕ್ರಿಯೆ. ಯಾವಾಗಿನಿಂದ ಗಣತಿ ಆರಂಭವಾಗಲಿದೆ, ಹೇಗೆ ನಡೆಯಲಿದೆ ಎಂಬ ಬಗ್ಗೆ ಶೀಘ್ರವೇ ಮಾಹಿತಿ ಒದಗಿಸುತ್ತೇವೆ ಎಂದಿದ್ದಾರೆ.