ಬೆಂಗಳೂರು: ಸೋನು ನಿಗಮ್ ವಿರುದ್ಧ ಕನ್ನಡಿಗರ ಆಕ್ರೋಶ ಮುಂದುವರೆದಿದೆ.
ಕನ್ನಡಿಗರನ್ನು ಸೋನು ನಿಗಮ್ ಕೆಣಕಿದ್ದಾರೆ. ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವಾದರೆ ಕನ್ನಡ ಹಾಡುಗಳಿಗೆ ಸೋನು ನಿಗಮ್ ಬ್ಯಾನ್ ಮಾಡಬೇಕು. ಕೂಡಲೇ ಸೋನು ನಿಗಮ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ ಹಮ್ಮಿಕೊಂಡಿದೆ.
ಇಂದು ಫ್ರೀಡಂ ಪಾರ್ಕ್ ನಲ್ಲಿ ಕರವೇ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸೋನು ನಿಗಮ್ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ನೂರಾರು ಕರವೇ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ