ಚಾಮರಾಜನಗರ: ಐದು ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳಿಸಿರುವುದು ಬರೀ ಕಣ್ಣೀರು ಒರೆಸುವ ತಂತ್ರ ಎಂದು ನಿವೃತ್ತ ಐಎಫ್ ಎಸ್ ಅಧಿಕಾರಿ ಆರ್. ರಾಜು ಆಗ್ರಹಿಸಿದ್ದಾರೆ.
ಅರಣ್ಯಾಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳಿಸಿರುವುದು ಬರೀ ಕಣ್ಣೀರು ಒರೆಸುವ ತಂತ್ರ. ಈ ಘಟನೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ಇಲ್ಲವೇ ಪೊಲೀಸ್, ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರಮಾದ ನಡೆದರೆ ಕಡ್ಡಾಯ ರಜೆ ಮೇಲೆ ಕಳುಹಿಸಿರುವುದು ಸಮಂಜಸ ಕ್ರಮವಲ್ಲ. ಈ ಪ್ರಕರಣದಲ್ಲಿ ಡಿಸಿಎಫ್, ಎಸಿಎಫ್, ಆರ್ ಎಫ್ಒ ಸೇರಿದಂತೆ ಸಿಬ್ಬಂದಿಯ ಕರ್ತವ್ಯ ನಿರ್ಲಕ್ಷ್ಯ ಇರುವುದು ಗೋಚರವಾಗಿದೆ. ಹೀಗಾಗಿ ಅವರನ್ನೆಲ್ಲ ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.