ಬೆಂಗಳೂರು: ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ (KSRSAC)ನಲ್ಲಿ ಖಾಲಿ ಇರುವ ಉಪ ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರು ಸೇರಿ ಮೂರು ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೇ 21 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಉಪ ಪ್ರಾಂಶುಪಾಲರ ಒಂದು ಹುದ್ದೆ ಹಾಗೂ ಅಸಿಸ್ಟಂಟ್ ಪ್ರೊಫೆಸರ್ ವಿಭಾಗದಲ್ಲಿ ಎರಡು ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಬಿ.ಇ ಅಥವಾ ಬಿ.ಟೆಕ್, ಎಂಇ, ಎಂ.ಟೆಕ್, ಪಿಎಚ್.ಡಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- https://ksrsac.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು.
- ಉಪ ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರು ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ksrsac-gok@karnataka.gov.in ಇ-ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.