ಬೆಳಗಾವಿ: ಯೋಧನ ಅಂತ್ಯಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕೆ ಲಾಠಿಚಾರ್ಜ್ ನಡೆಸಿರುವ ಘಟನೆ ನಡೆದಿದೆ.
ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ಯೋಧ ವಿಷ್ಣು ಕಾರಜೋಳ (25) ಮೂರು ತಿಂಗಳ ಹಿಂದೆ ಕರ್ತವ್ಯದಲ್ಲಿದ್ದಾಗ ಬಿದ್ದು ಗಾಯಗೊಂಡಿದ್ದರು. ಗಾಯಗೊಂಡ ಯೋಧನನ್ನು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು.
ಭಾನುವಾರ ಸ್ವಗ್ರಾಮ ಮುರಗೋಡ್‍ಗೆ ಮೃತ ಯೋಧನ ಪಾರ್ಥಿವ ಶರೀರವನ್ನು ತರಲಾಗಿತ್ತು. ಅಂತ್ಯಸಂಸ್ಕಾರಕ್ಕಾಗಿ ಗ್ರಾಮದಲ್ಲಿ ಸರ್ಕಾರಿ ಜಾಗಕ್ಕಾಗಿ ಗ್ರಾಮಸ್ಥರು, ಗ್ರಾಪಂಗೆ ಮನವಿ ಮಾಡಿದ್ದರು. ಪಿಡಿಒ ಸರ್ಕಾರಿ ಜಾಗ ಕೊಡಲು ಸಾಧ್ಯವಿಲ್ಲ. ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡುವಂತೆ ಹೇಳಿದ್ದರು. ಹೀಗಾಗಿ ಗ್ರಾಮಸ್ಥರು ಪ್ರತಿಭಟನೆಗೆ ನಡೆಸಿದ್ದರು. ಆಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.