ಬೆಂಗಳೂರು : ಬೆಂಗಳೂರಿನ ಲಾಡ್ಜ್‌ನಲ್ಲಿ ಪ್ರೇಮಿಗಳಿಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ.

ಮಾಹಿತಿಗಳ ಪ್ರಕಾರ ಮನೆಯಲ್ಲಿ ಪೋಷಕರು ಪ್ರೀತಿಗೆ ಒಪ್ಪಿಕೊಂಡಿಲ್ಲ ಅನ್ನೋ ಕಾರಣಕ್ಕೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಯಲಹಂಕದ ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿರುವ 6 ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವ ಲಾಡ್ಜ್‌ಗೆ ಬಂದಿದ್ದ ಲವ್ವರ್ಸ್, ಪೆಟ್ರೋಲ್ ಸುರಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.
ಮೃತ ಯುವತಿ ಸ್ಫಾನಲ್ಲಿ ಕೆಲಸ ಮಾಡ್ತಿದ್ದು, ಯುವಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ತಮ್ಮ ಮನೆಯಲ್ಲಿ ಪ್ರೀತಿಗೆ ಒಪ್ಪಿಗೆ ಸಿಗದ ಕಾರಣಕ್ಕೆ ಇಬ್ಬರು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದಾರೆ.
ಲಾಡ್ಜ್‌ಗೆ ಬಂದ ಇಬ್ಬರು ಏಕಾಏಕಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಎಚೆತ್ತ ಲಾಡ್ಜ್ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ಸಿಬ್ವಬಂದಿಗೆ ಮಾಹಿತಿ ರವಾಸಿದ್ದಾರೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿ ದೌಡಿಸಿದ್ದು, ಅಷ್ಟರಲ್ಲಾಗಲೇ ಇಬ್ಬರೂ ಮೃತಪಟ್ಟಿದ್ದರು. ಸದ್ಯ ಈ ಘಟನಾ ಸಂಬಂಧ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.