ಬೆಂಗಳೂರು: ಮಹದಾಯಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಬಲಿ ಕೊಡಲು ಬಿಜೆಪಿ ಅವಕಾಶ ನೀಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಹದಾಯಿ ಯೋಜನೆಗೆ ಗೋವಾ ಸಿಎಂ ಕ್ಯಾತೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಸಿಎಂ ರಾಜಾರೋಷವಾಗಿ ಹೇಳಿಕೆ ನೀಡಿದ್ದಾರೆ. ಸಂತೋಷ, ರಾಜ್ಯ ಬಿಜೆಪಿ ಸದಾ ರಾಜ್ಯದ ಜನರ ಜೊತೆ ಇರುತ್ತದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ರಾಜ್ಯ ಬಿಜೆಪಿ ಸಿದ್ಧವಾಗಿರುತ್ತದೆ. ಗೋವಾ ಮುಖ್ಯಮಂತ್ರಿ ಹಾಗೂ ಪ್ರಹ್ಲಾದ್ ಜೋಶಿ ಅವರು ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಕರ್ನಾಟಕದ ಹಿತಾಸಕ್ತಿ ಬಲಿ ಕೊಡಲು ಬಿಜೆಪಿ ಅವಕಾಶ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.