ಮೈಸೂರು: ಗೃಹಲಕ್ಷ್ಮೀ ಹಣದಲ್ಲಿ ವರ ಮಹಾಲಕ್ಷ್ಮೀ ವೃತಾಚರಣೆ ಮಾಡಿದ್ದೇವೆ. ಇನ್ನೂ 3 ತಿಂಗಳ ಬಾಕಿ ಹಣ ಹಾಕುವಂತೆ ಸಿಎಂ ಸಿದ್ದರಾಮಯ್ಯಗೆ ಮಹಿಳೆಯರು ಮನವಿ ಮಾಡಿದ್ದಾರೆ. ಮೈಸೂರು ನಗರದ ಆಲನಹಳ್ಳಿ ನಿವಾಸಿ ಜ್ಯೋತಿ ಮಹದೇವ ಸ್ವಾಮಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿ, ಎರಡು ವರ್ಷದಿಂದ ನಮ್ಮ ಖಾತೆಗೆ ಗೃಹಲಕ್ಷ್ಮಿ ಹಣವನ್ನು ಸರ್ಕಾರ ನೀಡುತ್ತಿದ್ದು, ಬಡವರಿಗೆ ಗೃಹಲಕ್ಷ್ಮಿ ಹಣದಿಂದ ಹಬ್ಬ ಹರಿದಿನಗಳನ್ನು ಆಚರಿಸಲು ಅನುಕೂಲವಾಗುತ್ತಿದೆ ಎಂದಿದ್ದಾರೆ.
ಆದರೆ ಮೂರು ತಿಂಗಳಿಂದ ಖಾತೆಗೆ ಗೃಹಲಕ್ಷ್ಮಿ ಹಣ ಬಂದಿಲ್ಲ. ಹಾಗಾಗಿ ಸರಳವಾಗಿ ಆಚರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬರುವ ನಿರೀಕ್ಷೆ ಮಾಡುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣರಾದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಅಭಿನಂದನೆ ಎಂದು ಜ್ಯೋತಿ ಹೇಳಿದ್ದಾರೆ. ಅಷ್ಟಲ್ಲದೇ, ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಪೂಜೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಒಳಿತಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.



















