ಕೊಡಗು: ಕಾಡನೆ ದಾಳಿಗೆ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಎಮ್ಮೆ ಗುಂಡಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟಕ್ಕೆ ತೆರಳುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಚಲ್ಲಾ ದೊರೆ ಮೇಸ್ತ್ರಿ (58) ಸಾವನ್ನಪ್ಪಿರುವ ದುರ್ದೈವಿ. ಕಾಫಿ ತೋಟಗಳಿಗೆ ನುಗ್ಗಿದ್ದ ಆನೆ ಮತ್ತೊಂದು ತೋಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲೇ ಕಾಡಾನೆಗಳು ಬೀಡು ಬಿಟ್ಟಿವೆ. ಕಾಡಾನೆಗಳ ಹಾವಳಿಯಿಂದ ರೋಸಿ ಹೋಗಿರುವ ಕಾರ್ಮಿಕರು ಕಾಡಾನೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.