ಬೆಂಗಳೂರು: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2025) ಖಾಲಿ ಇರುವ ಮ್ಯಾನೇಜರ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ತಲಾ ಒಂದು ಹುದ್ದೆ ಖಾಲಿ ಇದ್ದು, ಮೇ 22ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. cochinshipyard.in.ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 96,350-1,15,620 ರೂ. ವೇತನ ನೀಡಲಾಗುತ್ತದೆ. ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಯ ವಯಸ್ಸು 40 ವರ್ಷ ದಾಟಿರಬಾರದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳಿಗೆ ಒಂದು ಸಾವಿರ ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- https://udupicsl.com/ ವೆಬ್ ಸೈಟ್ ಗೆ ಭೇಟಿ ನೀಡಿ
- ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಅಧಿಸೂಚನೆ ಓಪನ್ ಮಾಡಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.