ಇರಾನ್ ನ ಬಂದರು ನಗರಿ ಅಬ್ಬಾಸ್ ನಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇರಾನ್ ಪ್ರಮುಖ ಬಂದರುಗಳಲ್ಲಿ ಒಂದಾಗಿರುವ ಅಬ್ಬಾಸ್ ನಲ್ಲಿ ದೊಡ್ಡ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ.
ಕಂಟೇನರ್ ಗಳ ದಿಢೀರ್ ಸ್ಫೋಟದಿಂದಲೇ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇನ್ನು ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಬಂದರು ಅಗ್ನಿಶಾಮಕ ಸಿಬ್ಬಂದಿ ತುರ್ತು ಕಾರ್ಯಾಚರಣೆ ಆರಂಭಿಸಿದೆ. ಆದರೆ, ಬೆಂಕಿ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೂರಾರು ಸಿಬ್ಬಂದಿ ಪರದಾಡುವಂತಾಯಿತು. ಈ ವೇಳೆ 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅಗ್ನಿ ನಿಯಂತ್ರಿಸೋ ಕಾರ್ಯ ಭರದಿಂದ ಸಾಗಿದೆ.