ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಹಿಡಿಯಬೇಕು ಎಂಬ ಕನಸಿದೆಯೇ? ಇದಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಿಯೇ? ಹಾಗಾದ್ರೆ, ನಿಮಗೆ ಇಲ್ಲಿ ಗುಡ್ ನ್ಯೂಸ್ ಇದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 102 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 102 ಸೆಕ್ಷನ್ ಆಫೀಸರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಇದಕ್ಕಾಗಿ ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಒಟ್ಟು ಹುದ್ದೆಗಳು: 102
ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 31
ಉದ್ಯೋಗ ಸ್ಥಳ: ದೇಶಾದ್ಯಂತ
ಗರಿಷ್ಠ 56 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೊದಲಿಗೆ ಎರಡು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಬಳಿಕ ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ಗಮನಿಸಿ ಅವಧಿಯನ್ನು ವಿಸ್ತರಣೆ ಮಾಡಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ mea.gov.inಗೆ ಸಂಪರ್ಕಿಸಬಹುದು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ mea.gov.inಗೆ ಭೇಟಿ ನೀಡಬೇಕು
ಅಧಿಸೂಚನೆಯನ್ನು ಸರಿಯಾಗಿ ಓದಬೇಕು
ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ
Section Officer (PSP-Cadre), PSP Division, MEA, Room No. 26, Patiala House, New Delhi (ಅವಶ್ಯಕತೆ ಇದ್ದರೆ sopspcadre@mea.gov.in ವಿಳಾಸಕ್ಕೂ ಇ-ಮೇಲ್ ಮಾಡಬಹುದು)



















