ಬೆಂಗಳೂರು: ಅಮೃತ್ ಯೋಜನೆ ಅನುಷ್ಠಾನ ಹೆಸರಿನಲ್ಲಿ ಹಣ ದುರ್ಬಳಕೆಯಾಗಿರುವ ಆರೋಪವೊಂದು ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಮಾಹಿತಿ ನೀಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ರಾಜ್ಯದ ಇಬ್ಬರು ಸಚಿವರು ಈ ಅಕ್ರಮದಲ್ಲಿ ಭಾಗಿ ಆಗಿದ್ದಾರೆಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದರು.
ಅಲ್ಲದೇ, ಅಮೃತ್ ಯೋಜನೆ ಅನುಷ್ಠಾನದ ಹೆಸರಿನಲ್ಲಿ ಸುಮಾರು 17 ಸಾವಿರ ಕೋಟಿ ರೂ. ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇಬ್ಬರು ಸಚಿವರು, ಓರ್ವ ಶಾಸಕರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ನಗರಾಭಿವೃದ್ಧಿ ಇಲಾಖೆಯಿಂದ ರಾಜ್ಯ ಸರ್ಕಾರ ಕ್ಕೆ ಪತ್ರ ಬರೆಯಲಾಗಿದೆ. ಈ ಕುರಿತು ಒಂದು ವಾರದಲ್ಲಿ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.