ಪಾಕಿಸ್ತಾನ ವಿರುದ್ಧ ಸಮರ ಸಾರಿದ ಭಾರತ 100ಕ್ಕೂ ಹೆಚ್ಚು ಉಗ್ರರನ್ನು ಸದೆಬಡೆದಿದೆ. ಇದರ ಬೆನ್ನಲ್ಲೇ ಇದೀಗ ರಾಷ್ಟ್ರಪತಿ ಭವನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಆಪರೇಷನ್ ಸಿಂಧೂರದ ಸಂಪೂರ್ಣ ಮಾಹಿತಿಯನ್ನ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಮೋದಿ ವಿವರಿಸಲಿದ್ದಾರೆ.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿದ ದಾಳಿಯ ಮಾಹಿತಿಯನ್ನು ನೀಡಲಿರುವ ಮೋದಿ, ದೇಶದಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.