ಬೆಂಗಳೂರು: ಇಂದು ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಬೀದರ್ ಜಿಲ್ಲೆಯಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೀದರ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.