ಲಕ್ನೋ: ಮಗಳ ಕೈ ಹಿಡಿಯಬೇಕಾದವನೊಂದಿಗೆ ಅತ್ತೆ ಪರಾರಿಯಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಉತ್ತರ ಪ್ರದೇಶದ (Uttar Pradesh) ಅಲಿಗಢದ ಮದ್ರಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಧುವಿನ ತಾಯಿ ಅನಿತಾ ತನ್ನ ಭಾವಿ ಅಳಿಯನೊಂದಿಗೆ ಮನೆಯಲ್ಲಿದ್ದ 3.5 ಲಕ್ಷ ರೂ.ಕ್ಕೂ ಅಧಿಕ ನಗದು, 5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾಳೆ.
ಓಡಿ ಹೋಗಿರುವ ಅನಿತಾಳ ಮಗಳಿಗೆ ಯುವಕನೊಂದಿಗೆ ವಿವಾಹ ನಿಶ್ಚಯವಾಗಿತ್ತು. ಕೇವಲ 10 ದಿನಗಳಲ್ಲಿ ಮದುವೆ ನಡೆಯುವುದರಲ್ಲಿ ಇತ್ತು. ಹೀಗಾಗಿ ಮನೆಯಲ್ಲಿ ಮದುವೆಯ ತಯಾರಿ ಕೂಡ ನಡೆಯುತ್ತಿತ್ತು. ಸಂಬಂಧಿಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಅನಿತಾ ತನ್ನ ಮಗಳನ್ನು ಮದುವೆಯಾಗಬೇಕಿದ್ದ ಯುವಕನೊಂದಿಗೆ ಓಡಿ ಹೋಗಿದ್ದಾಳೆ. ಇದು ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ಆಶ್ಚರ್ಯವನ್ನುಂಟು ಮಾಡಿದೆ.
ರಾಹುಲ್ ಎಂಬ ಯುವಕನೊಂದಿಗೆ ಅನಿತಾ ಓಡಿ ಹೋಗಿದ್ದಾರೆ. ರಾಹುಲ್ ಮತ್ತು ನನ್ನ ತಾಯಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಫೋನ್ನಲ್ಲಿ ಸಾಕಷ್ಟು ಮಾತನಾಡುತ್ತಿದ್ದರು ಎಂದು ಮಗಳು ದೂರು ನೀಡಿದ್ದಾರೆ.