ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಅವರನ್ನು ನಿನ್ನೆ(ಮಂಗಳವಾರ) ತಡರಾತ್ರಿ 10.20ರ ಸುಮಾರಿಗೆ ಬೆಂಗಳೂರಿನ ಹೆಬ್ಬಾಳ ನಿವಾಸದಲ್ಲಿ ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಳಿಕ ರಾತ್ರಿ ಒಂದು ಗಂಟೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾದೀಶರು ಒಂದು ದಿನ ಕಸ್ಟಡಿಗೆ ತೆಗೆದುಕೊಂಡು, ಇಂದು (ಬುಧವಾರ) ಸಂಜೆ 5:30 ರ ಒಳಗಾಗಿ ಕೋರ್ಟ್ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ.
ಈ ಹಿನ್ನಲೆ ಇ.ಡಿ ಅಧಿಕಾರಿಗಳು ದಿನೇಶ್ ಕುಮಾರ್ ಅವರನ್ನು ನ್ಯಾಯದೀಶರ ಮನೆಯಿಂದ ನೇರವಾಗಿ ಇಡಿ ಕಛೇರಿಗೆ ಕರೆದೊಯ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ದಿನೇಶ್ ಕುಮಾರ್ ಆಯುಕ್ತರಾಗಿದ್ದ ಅವಧಿಯಲ್ಲಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ಬದಲಿಗೆ 1000ಕ್ಕೂ ಹೆಚ್ಚು ನಿವೇಶನಗಳನ್ನು ಮದ್ಯವರ್ತಿಗಳ ಮೂಲಕ ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪದ ಮೇಲೆ ಬಂಧಿಸಲಾಗಿದೆ.
ವಿಚಾರಣೆಯ ಬಳಿಕ ಇಂದು ಮಧ್ಯಾಹ್ನ 3.30ರ ನಂತರ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.