ಬೆಂಗಳೂರು: ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.
ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಇದಕ್ಕಾಗಿ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಹೇಗಾದರೂ ಮಾಡಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂಬ ಕಾರಣಕ್ಕೆ ಬಿಜೆಪಿ ತಯಾರಿ ನಡೆಸಿದೆ. ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ಮೇಲೆ ಬರೆ ಹಾಕಲು ತಯಾರಿ ನಡೆಸಿವೆ.
ಆರ್ ಸಿಬಿ ವಿಜಯೋತ್ಸವ ಕಾಲ್ತುಳಿತ, ಮಂಗಳೂರು ಕೋಮುಗಲಭೆ ಸೇರಿದಂತೆ ಹಲವು ಅಸ್ತ್ರಗಳನ್ನೇ ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಅಣಿಯಾಗಿವೆ. ಬಿಜೆಪಿ ಹಾಗೂ ಜೆಡಿಎಸ್ ಕಟ್ಟಿಹಾಕಲು ಕೂಡ ಕಾಂಗ್ರೆಸ್ ಸಿದ್ಧವಾಗಿ ನಿಂತಿದೆ.