ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Rikki Rai) ನ ಮೇಲೆ ದುಷ್ಕರ್ಮಿಗಳು ಫೈರಿಂಗ್ (Firing) ಮಾಡಿರುವ ಘಟನೆ ನಡೆದಿದೆ.
ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಹತ್ತಿರ ಈ ಘಟನೆ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಿಕ್ಕಿ ರೈ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಫೈರ್ ಮಾಡಿದ್ದಾರೆ.
. ಆದರೆ ಹಿಂಬದಿ ಸೀಟ್ನಲ್ಲಿದ್ದ ರಿಕ್ಕಿ ರೈ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಕ್ಕಿ ಕಳೆದ 2 ದಿನಗಳ ಹಿಂದೆಯಷ್ಟೇ ರಷ್ಯಾದಿಂದ ಮರಳಿ ಬಂದಿದ್ದರು. ಸಿಲಿಕಾನ್ ಸಿಟಿಯಲ್ಲಿ ರಿಯಲ್ ಎಸ್ಟೇಟ್ ಬಿಸಿನೆಸ್ನಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ.
70 ಎಂಎಂ ಬುಲೆಟ್ನ ಶಾಟ್ಗನ್ ಬಳಸಿ ಫೈರಿಂಗ್ ಮಾಡಲಾಗಿದೆ.