ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ಅಮಾನತ್ತಾಗಿದ್ದ ಅಡಿಷನಲ್ ಕಮಿಷನರ್ ಹುದ್ದೆಗೆ ಹೊಸ ಅಧಿಕಾರಿ ನೇಮಕ ಮಾಡಿಕೊಳ್ಳಲಾಗಿದೆ.
ಅಡಿಷನಲ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಜಾಗಕ್ಕೆ ಹೊಸ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಐಪಿಎಸ್ ವಂಶಿಕೃಷ್ಣ ಅವರನ್ನು ಆ ಜಾಗಕ್ಕೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕಾಸ್ ಕುಮಾರ್ ರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು.