ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 402 ರನ್ ಗಳಿಸಿದೆ.
ಈ ಮೂಲಕ ಭಾರತ ತಂಡಕ್ಕೆ ಬೃಹತ್ ಟಾರ್ಗೆಟ್ ನೀಡಿದೆ. ಅಲ್ಲದೇ, ಮೊದಲ ಇನ್ನಿಂಗ್ಸ್ನಲ್ಲಿ 356 ರನ್ ಗಳ ಬೃಹತ್ ಮುನ್ನಡೆ ಕಾಯ್ದುಕೊಂಡಿದೆ. ಅಕ್ಟೋಬರ್ 17 ರಿಂದ ಆರಂಭವಾಗಿರುವ ಮೊದಲ ಟೆಸ್ಟ್ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಕೇವಲ 46 ರನ್ ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲೆಂಡ್ ತಂಡ ಪಂದ್ಯದ ಮೂರನೇ ದಿನದಾಟದ ಎರಡನೇ ಸೆಷನ್ ನಲ್ಲಿ ತನ್ನ ಇನ್ನಿಂಗ್ಸ್ಗೆ ಅಂತ್ಯ ಹಾಡಿತು. ಕಿವೀಸ್ ಪರ ರಚಿನ್ ರವೀಂದ್ರ 134 ರನ್ ಗಳಿಸಿದರು. ಡೆವೋನ್ ಕಾನ್ವೇ 91 ರನ್ಗಳ ಕಾಣಿಕೆ ನೀಡಿದರು. ಟಿಮ್ ಸೌಥಿ 65 ರನ್ ಗಳಿಸಿದರು. ಕುಲ್ದೀಪ್ ಹಾಗೂ ಜಡೇಜಾ ತಲಾ 3 ವಿಕೆಟ್ ಪಡೆದರೆ, ಸಿರಾಜ್ 2, ಬುಮ್ರಾ ಹಾಗೂ ಅಶ್ವಿನ್ ತಲಾ 1 ವಿಕೆಟ್ ಪಡೆದು ಮಿಂಚಿದರು.
ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 46 ರನ್ ಗಳಿಗೆ ಆಲೌಟ್ ಆಯಿತು. ಹೀಗಾಗಿ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲೆಂಡ್ ತಂಡ ದಿನದಾಟದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 180 ರನ್ ಗಳಿಸಿತ್ತು. ಮೂರನೇ ದಿನದಾಟವನ್ನು ಆರಂಭಿಸಿದ ಕಿವೀಸ್ ಪಡೆ, ಮೂರನೇ ದಿನದ ಎರಡನೇ ಸೆಷನ್ನಲ್ಲಿ ಉಳಿದ 7 ವಿಕೆಟ್ಗಳನ್ನು ಕಳೆದುಕೊಂಡು 222 ರನ್ ಕಲೆಹಾಕಿತು. ಮೂರನೇ ದಿನ ಡ್ಯಾರಿಲ್ ಮಿಚೆಲ್ (18), ಟಾಮ್ ಬ್ಲಂಡೆಲ್ (5), ಗ್ಲೆನ್ ಫಿಲಿಪ್ಸ್ (14) ಮತ್ತು ಮ್ಯಾಟ್ ಹೆನ್ರಿ (8) ಗಳಿಸಿದರು.
ಆಗ ರಚಿನ್ ತಮ್ಮ ಟೆಸ್ಟ್ ವೃತ್ತಿಜೀವನದ ಎರಡನೇ ಶತಕವನ್ನು ಪೂರ್ಣಗೊಳಿಸಿದರು. ಇತ್ತ ಹಿರಿಯ ವೇಗಿ ಟಿಮ್ ಸೌಥಿ ಕೂಡ ತಮ್ಮ ಟೆಸ್ಟ್ ವೃತ್ತಿಜೀವನದ ಏಳನೇ ಅರ್ಧಶತಕ ಸಿಡಿಸಿದರು.