ಕೇಂದ್ರ ಸರ್ಕಾರಿ ಒಡೆತನದ ಇನ್ಶೂರೆನ್ಸ್ ಕಂಪನಿಯಾಗಿರುವ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL)ನಲ್ಲಿ ಖಾಲಿ ಇರುವ 500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವಿಭಾಗಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜೂನ್ 20ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅಧಿಕೃತ ವೆಬ್ಸೈಟ್ newindia.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿವರಿಗೆ ಮಾಸಿಕ 9 ಸಾವಿರ ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ಪ್ರಾದೇಶಿಕ ಭಾಷೆಯ ಜ್ಞಾನ ಹೊಂದಿರಬೇಕು ಎಂಬ ನಿಯಮ ರೂಪಿಸಲಾಗಿದೆ.
ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 944 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 708 ರೂ. ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಕಂಪನಿಯ ಅಧಿಕೃತ newindia.co.inಗೆ ಭೇಟಿ ನೀಡಿ.
- ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಮತ್ತು ಸಂಪೂರ್ಣವಾಗಿ ಓದಿ.
- ಜೂನ್ 6ರ ನಂತರ ಅಗತ್ಯವಿರುವ ದಾಖಲೆಗಳು, ಫೋಟೋವನ್ನು ಅಟ್ಯಾಚ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿದ ನಂತರ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಪಯೋಗಕ್ಕಾಗಿ ಬಳಸಲು ಅರ್ಜಿ ಸಂಖ್ಯೆ/ಅಧಿಸೂಚನೆ ಸಂಖ್ಯೆಯನ್ನು ಸೇವ್ ಮಾಡಿಟ್ಟುಕೊಳ್ಳಿ