ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ಲಭಿಸಿದೆ. ಬೆಂಗಳೂರಿನಲ್ಲಿರುವ ನೃಪತುಂಗ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಇಬ್ಬರು ಸಹಾಯಕ ಪ್ರಾಧಾಪಕರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿ ಮಾಡಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ನೃಪತುಂಗ ವಿಶ್ವವಿದ್ಯಾಲಯ
ಹುದ್ದೆ ಹೆಸರು: ಸಹಾಯಕ ಪ್ರಾಧ್ಯಾಪಕ
ನೇಮಕಾತಿ ವಿಧಾನ: ಸಂದರ್ಶನ
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನ ನಡೆಯುವ ದಿನಾಂಕ: ಅಕ್ಟೋಬರ್ 10
ಎಜುಕೇಶನಲ್ ಸ್ಟಡೀಸ್ ವಿಭಾಗದಲ್ಲಿ ಒಬ್ಬ ಅಸಿಸ್ಟಂಟ್ ಪ್ರೊಫೆಸರ್ ಹಾಗೂ ಬಿಬಿಎ ವಿಭಾಗದಲ್ಲಿ ಮತ್ತೊಬ್ಬರನ್ನು ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸ್ನಾತಕೋತ್ತರ ಪದವಿ, ಎಂ.ಎಡ್, ಎಂಬಿಎ, ಎಂ.ಕಾಂ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ಅಭ್ಯರ್ಥಿಗಳು nublr.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗುವವರು ಶೈಕ್ಷಣಿಕ ಸೇರಿ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು. ಸಂದರ್ಶನವು ಬೆಳಗ್ಗೆ 11 ಗಂಟೆಯಿಂದಲೇ ಆರಂಭವಾಗಲಿದೆ.
“ಸಂದರ್ಶನ ನಡೆಯುವ ಸ್ಥಳ”
University Vice Chancellors Office, Nrupathunga University, Bengaluru, Karnataka