ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ (Parliament Session) ಆರಂಭವಾಗಿದ್ದು, ಮೊದಲ ದಿನ ವಿಪಕ್ಷಗಳ ಗದ್ದಲ ಹೆಚ್ಚಾಗಿದ್ದರಿಂದಾಗಿ ಉಭಯ ಸದನಗಳ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು.
ಅಮೆರಿಕ ನ್ಯಾಯಾಲಯದಲ್ಲಿ ಉದ್ಯಮಿ ಗೌತಮ್ ಅದಾನಿ (Gautam Adani) ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಬೇಕೆಂದು ಕಾಂಗ್ರೆಸ್ (Congress) ಆಗ್ರಹಿಸಿತ್ತು. ಉತ್ತರಪ್ರದೇಶದ ಸಂಭಾಲ್ನಲ್ಲಿ ಮಸೀದಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರ (Sambal Clash) ಖಂಡಿಸಿ ಎಐಎಂಐಎಂ ಸೇರಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು. ಹೀಗಾಗಿ ಗದ್ದಲ ಜೋರಾಗುತ್ತಿದ್ದಂತೆ ರಾಜ್ಯಸಭೆ ಮತ್ತು ಲೋಕಸಭೆಯನ್ನು ಬುಧವಾರಕ್ಕೆ ಮುಂದೂಡಿಕೆ ಮಾಡಲಾಯಿತು.