ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಅಮುಲ್ ಮಳಿಗೆಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಿತು.
ನಮ್ಮ ಮೆಟ್ರೋ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಹಾಗೂ ಕೆಎಂಎಫ್ ಎಂಡಿ ಶಿವಸ್ವಾಮಿ ಸಭೆ ನಡೆಸಿದರು. ಡಿಸಿಎಂ ಡಿಕೆಶಿ ಹೇಳಿಕೆ ಬೆನ್ನಲ್ಲೇ ಉಭಯ ಸಂಸ್ಥೆಯ ಮುಖ್ಯಸ್ಥರು ಸಭೆ ನಡೆಸಿದ್ದಾರೆ.
ಡಿಸಿಎಂ ಹೇಳಿದಂತೆ 8 ಕಡೆ ನಂದಿನಿ ಮಳಿಗೆಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ. ಸರ್ಕಾರದ ನಿರ್ದೇಶನದಂತೆ 2 ಕಡೆಗಳಲ್ಲಿ ಮಾತ್ರ ಅಮುಲ್ ಗೆ ಅವಕಾಶ ನೀಡಲಾಗಿದೆ. ಉಳಿದ 8 ಕಡೆಗಳಲ್ಲಿ ನಂದಿನಿ ಮಳಿಗೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಗ್ಲೋಬಲ್ ಟೆಂಡರ್ ಬಗ್ಗೆ ಮುಂದಿನ ಕ್ರಮ ಸರ್ಕಾರ ತೆಗೆದುಕೊಳ್ಳುತ್ತೆ ಎಂದು BMRCL ಪ್ರಭಾರ MD ಮಹೇಶ್ವರ್ ರಾವ್ ಹೇಳಿದ್ದಾರೆ.