ಶಿವಮೊಗ್ಗ: ಕೇಂದ್ರ ಸರ್ಕಾರದ ಜನೌಷಧ ಕೇಂದ್ರ ಮುಚ್ಚುವ ವಿಚಾರ ಖಂಡಿಸಿ ಶಿವಮೊಗ್ಗ ಮತ್ತು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರಗಳಲ್ಲಿ ಜಿಜೆಪಿ ಪ್ರತಿಭಟನೆ ನಡೆಸಿತು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಪರಿಷತ್ ಸದಸ್ಯ ಡಿ ಎಸ್ ಅರುಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು. ಶಿವಮೊಗ್ಗದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.