ಕೇರಳದ ವೈನಾಡಿನಲ್ಲಿ ನಿರಂತರ ಮಳೆ ಹಿನ್ನಲೆಯಲ್ಲಿ ಮೈಸೂರಿನ ಕಬಿನಿ ಡ್ಯಾಂನಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಆದರೆ, ಕಪಿಲಾ ನದಿ ಪ್ರವಾಹಕ್ಕೆ ನಂಜನಗೂಡು ತಾಲೂಕಿನ ಹಲವು ಗ್ರಾಮಗಳ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸುತ್ತೂರು, ಬೊಕ್ಕಹಳ್ಳಿ, ಮೂಡಹಳ್ಳಿ, ತಾಯೂರು, ಹೊಸಕೋಟೆ, ಸುತ್ತ ನೂರಾರು ಎಕರೆ ಪ್ರದೇಶ ನೀರಿನಲ್ಲಿ ಮುಳುಗಡೆಯಾಗಿದ್ದು, ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿವೆ. ಹೀಗಾಗಿ ಸೂಕ್ತ ಪರಿಹಾರ ನೀಡುವಂತೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ರೈತರು ಒತ್ತಾಯ ಮಾಡಿದ್ದಾರೆ.