ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ನುಗ್ಗುತ್ತಿರುವ ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಸಿದೆ.
ಯಾದಗಿರಿಯ ಹೊರವಲಯದಲ್ಲಿರುವ ಸುಪ್ರಸಿದ್ಧ ವೀರಾಂಜನೇಯ ಹಾಗೂ ಕಂಗಳೇಶ್ವರ ದೇಗುಲಗಳು ಮುಳುಗಡೆಯಾಗಿವೆ. ಈಗಾಗಲೇ ಗುರುಸಣಗಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿಂದ ಭೀಮಾನದಿಗೆ 35 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ನದಿ ಉಗ್ರಾವಾರತಾರ ತಳೆದಿದೆ. ಈ ನಡುವೆ ನದಿ ತೀರದಲ್ಲಿ ಮೀನುಗಾರರು ಅಪಾಯವನ್ನು ಲೆಕ್ಕಿಸದೆ ಎಣ್ಣೆ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಜಿಲ್ಲಾಡಳಿತದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.