ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ (Muzrai Department) ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ (Plastic) ವಸ್ತುಗಳ ಬಳಕೆಯನ್ನು ಆಗಸ್ಟ್ 15ರಿಂದ ನಿಷೇಧಿಸಲಾಗಿದೆ.
ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ. ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ (Plastic Free Temple) ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ.
ಈ ಹಿನ್ನೆಲೆಯಲ್ಲಿ ಆದೇಶ ಜಾರಿಗೆ 2 ತಿಂಗಳ ಸಮಯ ನೀಡಲಾಗುತ್ತಿದೆ. ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದಿದ್ದಾರೆ.